ಸೋಮವಾರಪೇಟೆ, ಜೂ. 22: ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಗಳಿಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದ್ದು, ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಅಪರಾಹ್ನ 3 ಗಂಟೆಯ ಸಮಯದಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ರೇಂಜರ್ಸ್ ಬ್ಲಾಕ್ ನಿವಾಸಿಗಳಾದ ಅಬ್ದುಲ್ಲಾ ಮತ್ತು ಇಬ್ರಾಹಿಂ ಎಂಬವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದವರು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.