ನಾಪೆÇೀಕ್ಲು, ಜೂ. 24: ಪಟ್ಟಣದಲ್ಲಿ ಸಂಚರಿಸುವ ಎಲ್ಲಾ ವಾಹನಗಳು ಅಗತ್ಯ ದಾಖಲಾತಿ ಹೊಂದಿರುವದರೊಂದಿಗೆ ವಾಹನ ನಿಲುಗಡೆ ಸೂಚಿಸಿದ ಸ್ಥಳದಲ್ಲಿ ವಾಹನ ನಿಲುಗಡೆಗೊಳಿಸಿ ಪೆÇಲೀಸ್ ಇಲಾಖೆ ಯೊಂದಿಗೆ ಸಹಕರಿಸಬೇಕು. ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮಕೈಗೊಳ್ಳ ಲಾಗುವದೆಂದು ಪೆÇಲೀಸ್ ಠಾಣಾಧಿಕಾರಿ ಬಿ.ಎಸ್. ವೆಂಕಟೇಶ್ ಸೂಚನೆ ನೀಡಿದರು.
ನಾಪೆÇೀಕ್ಲು ವಾಹನ ಚಾಲಕರ ಮತ್ತು ಮಾಲೀಕರ ಸಂಘದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಪಟ್ಟಣದಲ್ಲಿ ವಾಹನ ನಿಲುಗಡೆ, ಆಟೋ ರಿಕ್ಷಾ ನಿಲುಗಡೆಗೆ ಸ್ಥಳಾವಾಕಾಶದ ಕೊರತೆ ಇದ್ದು, ಈಗಾಗಲೇ ನಿಗದಿಪಡಿಸಿದ ಆಟೋ ರಿಕ್ಷಾ ನಿಲ್ದಾಣದಲ್ಲಿ ಬೇರೆ ಇನ್ನಿತರ ವಾಹನಗಳ ನಿಲುಗಡೆಗೆ ಅವಕಾಶ ಇಲ್ಲ ಎಂದ ಅವರು, ಆಟೋ ರಿಕ್ಷಾ ನಿಲ್ದಾಣದಲ್ಲಿ ಖಾಸಗಿ ವಾಹನ ನಿಲ್ಲಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಸಿದರು. ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮತ್ತು ಸಾರ್ವಜನಿಕರ ಸಭೆಯನ್ನು ಕರೆಯ ಲಾಗುವದು. ಪಟ್ಟಣಕ್ಕೆ ಆಗಮಿಸುವ ಬಸ್ಗಳು ಬಸ್ ನಿಲ್ದಾಣದಲ್ಲಿ ಕೇವಲ 5 ನಿಮಿಷ ಮಾತ್ರ ನಿಲುಗಡೆಗೆ ಅವಕಾಶ ನೀಡಲಾಗುವದು. ಅದಕ್ಕೆ ಸಂಬಂಧಿಸಿದಂತೆ ಈ ವ್ಯಾಪ್ತಿಯಲ್ಲಿ ಓಡಾಡುತ್ತಿರುವ ಬಸ್ಗಳ ವೇಳಾ ಪಟ್ಟಿಯನ್ನು ಠಾಣೆಗೆ ನೀಡುವಂತೆ ಬಸ್ ಮಾಲೀಕರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.
ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಇದು ಕಂಡು ಬಂದಲ್ಲಿ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವದು ಎಂದು ಎಚ್ಚರಿಸಿದರು. ಪಟ್ಟಣದ ವರ್ತಕರು ತಮ್ಮ ಅಂಗಡಿಗಳಿಗೆ ಸಾಮಗ್ರಿಗಳನ್ನು ಖರೀದಿಸುವ ಸಂದರ್ಭ ಬೆಳಿಗ್ಗೆ 8 ಗಂಟೆ ಒಳಗೆ ಮತ್ತು ಸಂಜೆ 6 ಗಂಟೆ ಮೇಲೆ ಲಾರಿಯಿಂದ ಸಾಮಗ್ರಿ ಪಡೆದುಕೊಳ್ಳಬೇಕು ಎಂದು ಸೂಚಿಸಿದರು. ಸಭೆಯ ಅಧ್ಯಕ್ಷತೆಯನ್ನು ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಇ. ರಜಾಕ್ ವಹಿಸಿದ್ದರು. ವೇದಿಕೆಯಲ್ಲಿ ಮೂವೆರ ವಿನು ಕುಟ್ಟಪ್ಪ, ಕಾರ್ಯದರ್ಶಿ ಕೆ.ಕೆ. ಲೋಕೇಶ್ ಮತ್ತಿತರರು ಇದ್ದರು.