ಹೆಬ್ಬಾಳೆ, ಜೂ. 26 : ಅಕ್ರಮವಾಗಿ ಮನೆಯಲ್ಲಿ ಗಾಂಜಾ ಶೇಖರಿಸಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪಿ ಓರ್ವನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ತೊರೆನೂರು ಗ್ರಾಮದ ಲಕ್ಷ್ಮಪ್ಪ ಬಂಧಿತ ಆರೋಪಿಯಾಗಿದ್ದು, ಈತ ತನ್ನ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಶೇಖರಿಸಿಟ್ಟು ಮಾರಾಟಮಾಡುತ್ತಿದ್ದ ಬಗ್ಗೆ ದೊರೆತ ಮಾಹಿತಿ ಅನ್ವಯ ಧಾಳಿ ನಡೆಸಿದ ಪೊಲೀಸರು ಲಕ್ಷ್ಮಪ್ಪನನ್ನು ಬಂಧಿಸಿ 16,500 ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.