ಮಡಿಕೆÉೀರಿ, ಜೂ. 28: ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ರ್ಯಾಂಕಿಂಗ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಜುಲೈ 9 ಮತ್ತು 10 ರಂದು ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ, ನಗರದ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‍ನ ಸಹಯೋಗ ದಲ್ಲಿ ಎರಡು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ ಎಂದರು. 10, 13, 15, 17 ಮತ್ತು 19 ವರ್ಷ ದೊಳಗಿನ ಬಾಲಕ-ಬಾಲಕಿಯರಿಗೆ, ಮಹಿಳೆಯರಿಗೆ, ಪುರುಷರಿಗೆ, 40 ವರ್ಷ ಮತ್ತು 50 ವರ್ಷ ಮೇಲ್ಪಟ್ಟ ಪುರುಷರಿಗೆ ಸಿಂಗಲ್ಸ್ ಮತ್ತು ಡಬಲ್ಸ್ ಹಾಗೂ 19 ವರ್ಷದೊಳಗಿನ ಮತ್ತು ಮುಕ್ತ ಮಿಕ್ಸ್‍ಡ್ ಡಬಲ್ಸ್ ಪಂದ್ಯಾವಳಿಗಳನ್ನು ನಡೆಸಲಾಗುವ ದೆಂದು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ 9986152578 ಮತ್ತು 9480995559 ನ್ನು ಸಂಪರ್ಕಿಸ ಬಹುದಾಗಿದೆ.

ಗೋಷ್ಠಿಯಲ್ಲಿ ಸದಸ್ಯರಾದ ಉತ್ತಪ್ಪ, ಚೇತನ್, ತರಬೇತು ದಾರರಾದ ಅರುಣ್ ಪೆಮ್ಮಯ್ಯ ಹಾಗೂ ವಿನೋದ್ ಉತ್ತಪ್ಪ ಉಪಸ್ಥಿತರಿದ್ದರು.