ವೀರಾಜಪೇಟೆ, ಜೂ. 28: ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ತಾ. 29 ರಂದು (ಇಂದು) ಚಾಲನೆ ನೀಡಲಾಗುವದು ಎಂದು ಪಕ್ಷದ ಜಿಲ್ಲಾ ಸಮಿತಿಯ ಮುಖಂಡ ಹಾಗೂ ಪಟ್ಟಣ ಪಂಚಾಯಿತಿ ಹಿರಿಯ ಸದಸ್ಯ ಎಸ್.ಹೆಚ್. ಮತೀನ್ ತಿಳಿಸಿದ್ದಾರೆ.
ಪ್ರೆಸ್‍ಕ್ಲಬ್‍ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮತೀನ್ ಅವರು, ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಪುರಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಕಾರ್ಯಕರ್ತರಿಗೆ ಸದಸ್ಯತ್ವ ನೋಂದಣಿಯ ಜವಾಬ್ದಾರಿ ವಹಿಸಲಾಗುವದು. ನಂತರ ಪ್ರಾರಂಭದಲ್ಲಿ ವೀರಾಜಪೇಟೆ ಪಟ್ಟಣದಲ್ಲಿ ಸಂಚರಿಸಿ ಪಕ್ಷದ ಸದಸ್ಯತ್ವ ನೋಂದಣಿ ಮಾಡಲಾಗುವದು ಎಂದು ಮತೀನ್ ತಿಳಿಸಿದರು.