*ಗೋಣಿಕೊಪ್ಪಲು, ಜೂ. 21: ತಿತಿಮತಿ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಲೇರಿಯಾ ನಿಯಂತ್ರಣ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಯಿತು.
ವಿದ್ಯಾರ್ಥಿಗಳು, ಅಧ್ಯಾಪಕರು, ಜನಪ್ರತಿನಿಧಿಗಳು ಹಾಗೂ ವೈದ್ಯರು ಜಾಥಾದಲ್ಲಿ ಪಾಲ್ಗೊಂಡು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಯತಿರಾಜ್ ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ಮಲೇರಿಯಾ ನಿಯಂತ್ರಣ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವದಕ್ಕಾಗಿ ಶಾಲೆ, ಕಾಲೇಜು, ಹಾಡಿ ಹಾಗೂ ಆಸ್ಪತ್ರ್ರೆಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.
ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹೊಸಮನಿ ಮಾತನಾಡಿ, ಮಳೆಗಾಲದಲ್ಲಿ ಚರಂಡಿಯಲ್ಲಿ ನಿಲ್ಲುವ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಮಲೇರಿಯಾ, ಡೆಂಗಿ, ಚಿಕೂನ್ಗುನ್ಯ ರೋಗಗಳು ಹರಡುವ ಸಂಭವ ವಿರುತ್ತದೆ. ಈ ಬಗ್ಗೆ ಸಾರ್ವಜನಿಕರು ತಮ್ಮ ಮನೆಗಳ ಮುಂದೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಈ ಬಗ್ಗೆ ಜನಪ್ರತಿನಿಧಿಗಳು ಸಾರ್ವಜನಿಕರದಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್, ತಾ.ಪಂ. ಸದಸ್ಯೆ ಆಶಾಜೇಮ್ಸ್ ಈ ಸಂದರ್ಭ ಹಾಜರಿದ್ದರು. ಗ್ರಾಮದ ಮುಖ್ಯ ರಸ್ತೆಯಲ್ಲಿ ಸ್ವಚ್ಛತೆ ಮತ್ತು ಮಲೇರಿಯಾ ನಿಯಂತ್ರಣದ ಬಗ್ಗೆ ವಿವಿಧ ಘೋಷಣೆಗಳನ್ನು ಒಳಗೊಂಡ ಬ್ಯಾನರ್ಗಳ ಮೂಲಕ ಮೆರವಣಿಗೆ ನಡೆಸಲಾಯಿತು.