ಮಡಿಕೇರಿ, ಮೇ 13: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 125 ನೇ ಜನ್ಮ ದಿನಾಚರಣೆ ಹಾಗೂ ಬುದ್ಧ ಪೂರ್ಣಿಮೆಯನ್ನು ತಾ. 15 ರಂದು (ನಾಳೆ) ಆಚರಿಸಲಾಗುವದು.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಶಕ್ತಿ ವೃದ್ಧಾಶ್ರಮದ ತಂದೆ-ತಾಯಂದಿರಿಗೆ ಉಚಿತ ಬಟ್ಟೆ ವಿತರಿಸಲಾಗುವದು. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಲಾಗುವದೆಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11:30 ಗಂಟೆಗೆ ವೀರಾಜಪೇಟೆಯ ಹಿರಿಯ ಸಿವಿಲ್ ನ್ಯಾಯಾಧೀಶ ಬಾಬಾ ಸಾಹೇಬ್ ಜಿನರಾಳ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ.