ಸೋಮವಾರಪೇಟೆ, ಜೂ. 23: ಸಮೀಪದ ಮಾದಾಪುರ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ತಾ. 25 ರಂದು ಪೂರ್ವಾಹ್ನ 11 ಗಂಟೆಗೆ ಗಣಪತಿ ದೇವಾಲಯ ಸಮೀಪದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಂ ತಿಳಿಸಿದ್ದಾರೆ.

ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಲತಾ ನಾಗರಾಜು ವಹಿಸಲಿದ್ದು, ಜಿ.ಪಂ. ಸದಸ್ಯೆ ಕುಮುದಾ ಧರ್ಮಪ್ಪ, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ನೋಡಲ್ ಅಧಿಕಾರಿಯಾಗಿ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕಿ ಡಾ. ದಿವ್ಯ ಅವರುಗಳು ಭಾಗವಹಿಸಲಿದ್ದಾರೆ.