ಮಡಿಕೇರಿ, ಜೂ. 26: ಸಂಟಿಕೊಪ್ಪ ಪದವಿಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿಪೂರ್ವ ಕಾಲೇಜು, ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 27 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಸುಂಟಿಕೊಪ್ಪ ಉಲುಗುಲಿ ರಸ್ತೆಯಲ್ಲಿರುವ ಕಾಲೇಜಿನ ನೂತನ ಕಟ್ಟಡದ ಆವರಣದಲ್ಲಿ ನಡೆಯಲಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಎಂ.ಆರ್. ಸೀತಾರಾಮ್, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ ಮತ್ತಿತರರು ಭಾಗವಹಿಸಲಿದ್ದಾರೆ.