ಕುಶಾಲನಗರ, ಜೂ. 28: ಕುಶಾಲನಗರದಲ್ಲಿ ಪತ್ರಕರ್ತರೋರ್ವರಿಗೆ ಜೀವ ಬೆದರಿಕೆ ಹಾಕಿದ ಮರಳು ದಂಧೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.ಕುಶಾಲನಗರ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮರಳು ದಂಧೆಗೆ ಕೂಡಲೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಡಿಎಸ್‍ಎಸ್ ಜಿಲ್ಲಾ ಸಂಚಾಲಕ ಕೆ.ಬಿ. ರಾಜು ನೇತೃತ್ವದಲ್ಲಿ ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಪಿ.ಬಿ. ಪೂಣಚ್ಚ ಅವರ ಮೂಲಕ ಡಿವೈಎಸ್ಪಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಎಲ್.ಎಂ. ನಾಗರಾಜ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕೆ.ಟಿ. ಶ್ರೀನಿವಾಸ್ ಇದ್ದರು.