ಮಡಿಕೇರಿ, ಜೂ. 23: ಪ್ರವಾಸೋದ್ಯಮ ಇಲಾಖೆಯ 2014-15ನೇ ಸಾಲಿನ ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾವಂತ ನಿರುದ್ಯೋಗ ಯುವಕ-ಯುವತಿಯರಿಗೆ ರೂ. 2 ಲಕ್ಷಗಳ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸುವ ಸಂಬಂಧ ಅರ್ಜಿದಾರರು ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲಾತಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ತಾ. 24 ರಂದು ಬೆಳಿಗ್ಗೆ 10.30 ಗಂಟೆಗೆ ಉಪ ವಿಭಾಗಾಧಿಕಾರಿಯವರ ಸಭಾಂಗಣದಲ್ಲಿ ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ಆಯ್ಕೆ ಸಮಿತಿಯ ಸಭೆಯನ್ನು ಕರೆಯಲಾಗಿದೆ.

ಆದ್ದರಿಂದ ಅರ್ಜಿದಾರರು ಅರ್ಜಿಯೊಂದಿಗೆ ಸಲ್ಲಿಸಿದ ದಾಖಲಾತಿಗಳ ಮೂಲ ದಾಖಲಾತಿಗಳೊಂದಿಗೆ ತಾ. 24 ರಂದು ಬೆಳಿಗ್ಗೆ 10.30 ಗಂಟೆಗೆ ಸಭೆಗೆ ಹಾಜರಾಗುವಂತೆ ಪ್ರವಾಸೋದ್ಯಮ ಇಲಾಖೆಯ ಪ್ರಾದೇಶಿಕ ಪ್ರವಾಸಿ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.