ಶನಿವಾರಸಂತೆ, ಜೂ. 26: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಕಾಳಜಿ ಇದ್ದು, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಜಿ.ಪಂ. ಸದಸ್ಯ ಪುಟ್ಟರಾಜ್ ಅಭಿಪ್ರಾಯಪಟ್ಟರು.

ಸಮೀಪದ ದೊಡ್ಡಕೊಡ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಏರ್ಪಡಿಸಿದ್ದ ವನ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶಾಲಾ ಆವರಣದಲ್ಲಿ ಗಿಡ ನೆಟ್ಟು, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್ ಹಾಗೂ ಕೊಡ್ಲಿಪೇಟೆಯ ಭಗವಾನ್ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗೇಶ್, ಸದಸ್ಯರು, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಖಜಾಂಚಿ ಕವಿತಾ, ಸಂಪನ್ಮೂಲ ವ್ಯಕ್ತಿ ಎಸ್.ಎಂ. ಸುರೇಶ್, ಮಲ್ಲಿಕಾರ್ಜುನ್, ಗ್ರಾ.ಪಂ. ಉಪಾಧ್ಯಕ್ಷ ವಿಜಯಕುಮಾರ್, ಸದಸ್ಯರಾದ ಚಂದ್ರಶೇಖರ್, ಹೊನ್ನಮ್ಮ, ಫಯಾಜ್, ಮೂರ್ತಿ ಉಪಸ್ಥಿತರಿದ್ದರು.