ಮಡಿಕೇರಿ, ಜೂ. 22: ಮಾಜಿ ವಿಧಾನ ಪರಿಷತ್ ಸದಸ್ಯೆಯಾಗಿದ್ದ ಬೊಳ್ಳೆರ ಜಾಜಿ ಮಂದಣ್ಣ (92) ಅವರು ತಾ. 22ರಂದು ಮೈಸೂರಿನಲ್ಲಿ ವಿಧಿವಶರಾದರು. ಮೂಲತಃ ಕುಟ್ಟದವರಾದ ಜಾಜಿ ಮಂದಣ್ಣ (ತಾಮನೆ ಪಾಂಡಂಡ) ಅವರು ಮೈಸೂರಿನಲ್ಲಿ ನೆಲೆಸಿದ್ದರು.
ಬೆಂಗಳೂರು ಕೊಡವ ಸಮಾಜದ ಮಾಜಿ ಅಧ್ಯಕ್ಷರೂ ಆಗಿದ್ದ ಜಾಜಿ ಮಂದಣ್ಣ 1976ರಿಂದ 1982ರ ತನಕ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದರು. ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭ ಜಾಜಿ ಮಂದಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿತ್ತು. ದೇಹವನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾನ ಮಾಡಲಾಗಿದೆ. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸಂತಾಪ ಜಾಜಿ ಮಂದಣ್ಣ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಬಿ.ಟಿ. ಪ್ರದೀಪ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ .