ಮಡಿಕೇರಿ, ಜೂ. 21: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವೀರಾಜಪೇಟೆ, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ, ಜಿಲ್ಲಾ ಜನ ಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರ, ವ್ಯವಸ್ಥಾಪನ ಸಮಿತಿ, ನಗರಸಭೆ ಮಡಿಕೇರಿ, ಶ್ರೀ ರಾಜ ರಾಜೇಶ್ವರಿ ದೇವಸ್ಥಾನ ಕರ್ಣಂಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ತಾ. 23 ರಿಂದ 30 ರವರೆಗೆ ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮತ್ತು ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ 946ನೇ ಮದ್ಯವರ್ಜನ ಶಿಬಿರ ನಡೆಯಲಿದೆ. ತಾ. 23 ರ ಉದ್ಘಾಟನಾ ಸಮಾರಂಭದಲ್ಲಿ ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಧರ್ಮ ಕಾರ್ಯದರ್ಶಿ ಹೆಚ್.ಎಸ್. ಗೋವಿಂದರಾಜು ಸ್ವಾಮಿ, ಮದÀ್ಯವರ್ಜನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಲೀಲಾ ಶೇಷಮ್ಮ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಚಾರುಲತಾ ಸೋಮಲ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಎಸ್. ಸೀತಾರಾಮ ಶೆಟ್ಟಿ, ನಗರಸಭೆ ಸದಸ್ಯ ಕೆ.ಎಂ. ಗಣೇಶ್, ಕೆ. ನಿಡುಗಡೆ ಗ್ರಾ.ಪಂ. ಸದಸ್ಯ ಜಾನ್ಸನ್ ಪಿಂಟೋ ಮತ್ತಿತರರು ಭಾಗವಹಿಸಲಿದ್ದಾರೆ.

ತಾ. 30 ರ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಬಾನಂಗಡ ಅರುಣ್, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ ಮತ್ತಿತರರು ಭಾಗವಹಿಸಲಿದ್ದಾರೆ.