ಸೋಮವಾರಪೇಟೆ, ಜೂ. 26: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಬೆಂಗಳೂರಿನ ನಯನ ರಂಗ ಮಂದಿರದಲ್ಲಿ ನಡೆದ ಅಖಿಲ ಕರ್ನಾಟಕ ನಾಲ್ಕನೆಯ ಕವಿ ಸಮ್ಮೇಳನದಲ್ಲಿ ಇಲ್ಲಿನ ನಿವೃತ್ತ ಶಿಕ್ಷಕಿ ಎಲಿಜಬೆತ್ ಲೋಬೋ ಅವರಿಗೆ ರಾಷ್ಟ್ರೀಯ ಕವಿ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭ ಎಲಿಜಬೆತ್ ಲೋಬೋ ಅವರ ಕವನ ಸಂಕಲನ “ಕಾವ್ಯ ಪುಸ್ತಕ”ವನ್ನು ಮಾಜಿ ಸಚಿವ ರಾಮಚಂದ್ರೇಗೌಡ ಬಿಡುಗಡೆ ಮಾಡಿದರು. ಈ ಸಂದರ್ಭ ಶಿಕ್ಷಣ ತಜ್ಞ ಎಲ್.ಎನ್. ಮುಕುಂದರಾಜ್ ಮತ್ತಿತರರು ಉಪಸ್ಥಿತರಿದ್ದರು.