ಸೋಮವಾರಪೇಟೆ, ಜೂ. 8: ಸಮೀಪದ ಶಾಂತಳ್ಳಿ ಗ್ರಾಮದ ಶ್ರೀಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ತೆರೆಯಲಾಗಿರುವ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪಾಠೋಪಕರಣ ಹಾಗೂ ಕ್ರೀಡಾ ಉಪಕರಣಗಳು ಮತ್ತು ಸಮವಸ್ತ್ರವನ್ನು ವಿತರಿಸಲಾಯಿತು.
ಉದ್ಯಮಿ ಹರಪಳ್ಳಿ ರವೀಂದ್ರ ಹಾಗೂ ಅರುಣ್ಕುಮಾರ್ ಅವರುಗಳು ಉಚಿತವಾಗಿ ನೀಡಿದ ಸಮವಸ್ತ್ರಗಳನ್ನು 44 ವಿದ್ಯಾರ್ಥಿಗಳಿಗೆ ನೀಡಲಾಯಿತು. ದಾನಿಗಳ ನೆರವಿನಿಂದ ಪ್ರಸಕ್ತ ಸಾಲಿನಲ್ಲಿ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆ ಪ್ರಾರಂಭಿಸಲಾಗಿದ್ದು, ಮೂಲಭೂತ ಸೌಕರ್ಯಗಳನ್ನು ಅಳವಡಿಸಲಾಗಿದೆ ಎಂದು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸುಂದರ್ ತಿಳಿಸಿದರು.
ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.