ಮಡಿಕೇರಿ, ಜೂ. 5: ಕೊಡಗು ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಸಂಘ ಹಾಗೂ ವಿಶ್ವಕರ್ಮ ಮಹಿಳಾ ಸಮಿತಿಯ 36ನೇ ವರ್ಷದ ವಾರ್ಷಿಕ ಮಹಾಸಭೆ ಇಂದು ಬಾಲಭವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ವಿಶ್ವಕರ್ಮ ಸೇವಾ ಸಂಘದ ಅಧ್ಯಕ್ಷ ಕೆ.ಜಿ. ಅರುಣ್ ಆಚಾರ್ಯ ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ದೇವದಾಸ್ ಆಚಾರ್ಯ, ವಿಶ್ವಕರ್ಮ ಮಹಿಳಾ ಸಮಿತಿ ಅಧ್ಯಕ್ಷೆ ಸಂಧ್ಯಾ ರವಿ ಆಚಾರ್ಯ, ವಿಶ್ವಕರ್ಮ ಮಹಿಳಾ ಸಂಘದ ಸ್ಥಾಪಕ ಅಧ್ಯಕ್ಷೆ ಮೀನಾಕ್ಷಿ ಗಣೇಶ್ ಆಚಾರ್ಯ ಪಾಲ್ಗೊಂಡಿದ್ದರು. ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ನಡೆಯಿತು.