ಮಡಿಕೇರಿ, ಜೂ. 23: ಸೋಮವಾರಪೇಟೆಯಲ್ಲಿ ಮೋಹನ್ ಎಂಬವರ ಮೇಲೆ ನಡೆದ ಹಲ್ಲೆ ಹಾಗೂ ನಂತರ ನಡೆಯುತ್ತಿರುವ ಬೆಳವಣಿಗೆಯ ಕುರಿತು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿ ನ್ಯಾಯೋಚಿತವಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ನೂತನ ಎಂಎಲ್ಸಿ ವೀಣಾ ಅಚ್ಚಯ್ಯ ತಿಳಿಸಿದ್ದಾರೆ.
ಶಾಂತಿ ಸೌಹಾರ್ದತೆಗೆ ಯಾವದೇ ಧಕ್ಕೆಯಾಗದಂತೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿರುವ ಅವರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನ್ಯಾಯಬದ್ಧವಾದ ಕ್ರಮ ಕೈಗೊಳ್ಳಲಿರುವದಾಗಿ ವಿಶ್ವಾಸ ವ್ಯಕ್ತಪಡಿಸಿದರು.