ಕೂಡಿಗೆ, ಜೂ. 21: ಇಲ್ಲಿಗೆ ಸಮೀಪದ ಕೃಷಿ ಫಾರಂ ಆವರಣದಲ್ಲಿ ಕಳೆದ 9 ವರ್ಷಗಳ ಹಿಂದೆ ಪ್ರಾರಂಭವಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಸಕ್ತ ಸಾಲಿನಲ್ಲಿ ಪಿಯುಸಿ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಉತ್ತಮ ಫಲಿತಾಂಶ ಬರುತ್ತಿದ್ದರೂ ಸಹ, ಶೌಚಾಲಯ ಸೇರಿದಂತೆ ಮೂಲಭೂತ ಕೊರತೆಗಳಿಂದ ನಲುಗುತ್ತಿರುವ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾದ ವರದಿಗೆ ಸ್ಪಂಧಿಸಿ, ಕೂಡಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಭಾಸ್ಕರ್ ನಾಯಕ್, ಕೂಡು ಮಂಗಳೂರು ಸಹಕಾರ ಬ್ಯಾಂಕಿನ ನಿರ್ದೇಶಕ ಕೆ.ಕೆ. ಭೋಗಪ್ಪ, ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕರಾದ ಆರ್.ಕೆ. ಕೃಷ್ಣ, ಮಹೇಶ್, ಸೇರಿದಂತೆ ಇನ್ನಿತರರು ಕಾಲೇಜಿಗೆ ಭೇಟಿ ನೀಡಿ, ಪರಿಶೀಲಿಸಿ, ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ಜಿ.ಪಂ. ಹಾಗೂ ತಾ.ಪಂ. ಸಭೆಯಲ್ಲಿ ಚರ್ಚಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ವಾಗುವಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಉಪನ್ಯಾಸಕರು ಹಾಜರಿದ್ದರು.