ಮಡಿಕೇರಿ, ಜೂ.9: 2016-17 ನೇ ಸಾಲಿನ ಗ್ರಾಮೀಣ ಮತ್ತು ನಗರ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರ ನೋಂದಣಿ ಅವಧಿಯನ್ನು ಜುಲೈ 31 ರ ವರೆಗೆ ವಿಸ್ತರಿಸಲಾಗಿದೆ.

ಈ ಅವಧಿಯಲ್ಲಿ ಗ್ರಾಮೀಣ ಮತ್ತು ನಗರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಮತ್ತು ಕುಟುಂಬದ ಎಲ್ಲಾ ಅವಲಂಭಿತರು ಈ ಯೋಜನೆಯಲ್ಲಿ ನಿಗಧಿತ ವಂತಿಕೆಯನ್ನು ಪಾವತಿಸಿ ಸದಸ್ಯತ್ವವನ್ನು ಪಡೆದು ಯೋಜನೆಯ ಸೌಲಭ್ಯವನ್ನು ಪಡೆಯಬಹುದಾಗಿದೆ ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ, 08272-228519,225728ನ್ನು ಸಂಪರ್ಕಿಸುವಂತೆ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ವಿಜಯಕುಮಾರ್ ಅವರು ತಿಳಿಸಿದ್ದಾರೆ.