ಮಡಿಕೇರಿ, ಜೂ. 22: ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ವತಿಯಿಂದ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಸಮುದಾಯ ಅಭಿವೃದ್ಧಿ ಯೋಜನೆ ಯಡಿ ಕಾರ್ಯನಿರ್ವಹಿಸುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಶಿಶು ಕಲ್ಯಾಣ ಸಂಸ್ಥೆಯಲ್ಲಿ 3 ತಿಂಗಳ ಉಚಿತ ಹೊಲಿಗೆ ತರಬೇತಿಯು ಜುಲೈ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಆಸಕ್ತ 16 ವರ್ಷ ಮೇಲ್ಪಟ್ಟ ಅವಿದ್ಯಾವಂತ ಹಾಗೂ ನಿರುದ್ಯೋಗಿ ಯುವತಿಯರು ಮತ್ತು ಮಹಿಳೆಯರು ಈ ತರಬೇತಿಯ ಸದುಪಯೋಗವನ್ನು ಪಡೆಯ ಬಹುದಾಗಿದೆ ಎಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಮುಖ್ಯ ಸಂಯೋಜಕರು, ಆಂತರಿಕ ಸಂಯೋಜಕರು ಸಮುದಾಯ ಅಭಿವೃದ್ಧಿ ಯೋಜನೆ, ಸರ್ಕಾರಿ ಪಾಲಿಟೆಕ್ನಿಕ್, ಕುಶಾಲನಗರ ದೂ.ಸಂ 08276-271034 ನ್ನು ಸಂಪರ್ಕಿಸಬಹುದು.