ಮಡಿಕೇರಿ, ಜೂ. 24: 1975 ಜೂನ್, 25 ರಂದು ಅಂದಿನ ಪ್ರಧಾನಿ ಇಂದಿರಾಗಾಂಧೀಯವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿ ಪ್ರಜಾಪ್ರಭುತ್ವವಾದಿ ಧ್ವನಿಗಳನ್ನು ಹತ್ತಿಕ್ಕಿದ ಘಟನೆಯು ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಿರುವದರಿಂದ ಅದರ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ನೇತೃತ್ವದಲ್ಲಿ ತಾ. 27 ರಂದು ಮಡಿಕೇರಿ ಬಾಲಭವನದಲ್ಲಿ ಬೆಳಿಗ್ಗೆ 11.30ಕ್ಕೆ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಆಚರಿಸಲಾಗುವದೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ ತಿಳಿಸಿದ್ದಾರೆ.