ಮಡಿಕೇರಿ, ಜೂ. 16: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ತಾ. 17 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಸಂಜೆ 4 ಗಂಟೆಗೆ ನಗರದ ಅರಣ್ಯ ಭವನಕ್ಕೆ ಆಗಮಿಸಿ ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷದ ಪರಿಹಾರೋಪಾಯಗಳ ಕುರಿತು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರ ಅಧ್ಯಕ್ಷತೆಯಲ್ಲಿ ಉಸ್ತುವಾರಿ ಸಚಿವರು ಹಾಗೂ ವಿಧಾನ ಮಂಡಲದ ಸದಸ್ಯರೊಂದಿಗೆ ನಡೆದ ಸಭೆಯ ನಂತರ ಆಗಿರುವ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಜಿ. ಜಗದೀಶ್ ತಿಳಿಸಿದ್ದಾರೆ.