ಮಡಿಕೇರಿ, ಜೂ. 26: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ವೀರಾಜಪೇಟೆ ತಾಲೂಕು ಲ್ಯಾಂಪ್ಸ್, ಇವರುಗಳ ಸಂಯುಕ್ತ ಆಶ್ರಯದಲ್ಲಿ ತಾ. 27 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ತಿತಿಮತಿಯ ಲ್ಯಾಂಪ್ಸ್ ಸಹಕಾರ ಸಂಘದ ಸಭಾಂಗಣದಲ್ಲಿ ಗಿರಿಜನರ ದೊಡ್ಡ ಪ್ರಮಾಣದ ವಿವಿಧೊದ್ದೇಶ ಸಹಕಾರ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರುಗಳಿಗೆ ಕಾಯ್ದೆ ತಿದ್ದುಪಡಿ ಹಾಗೂ ಸಂಘದ ಅಭಿವೃದ್ಧಿ ಕುರಿತು ಶಿಕ್ಷಣ ಕಾರ್ಯಕ್ರಮ ನಡೆಯಲಿದೆ.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಎಸ್.ಪಿ. ನಿಂಗಪ್ಪ, ವೀರಾಜಪೇಟೆ ತಾಲೂಕು ಲ್ಯಾಂಪ್ಸ್ ಅಧ್ಯಕ್ಷ ಜೆ.ಕೆ. ರಾಮು, ಸೋಮವಾರಪೇಟೆ ತಾಲೂಕು ಲ್ಯಾಂಪ್ಸ್ ಅಧ್ಯಕ್ಷ ಎಸ್.ಎನ್. ರಾಜಾರಾವ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸದಸ್ಯರಾದ ಯು.ಎಸ್. ಜಗತ್, ಡಿ.ಪಿ. ಬೋಪಣ್ಣ, ಪಿ.ಜಿ. ನಂಜುಂಡ, ಕೆ.ಕೆ. ಮಂದಣ್ಣ ಮತ್ತಿತರರು ಭಾಗವಹಿಸಲಿದ್ದಾರೆ.