ಮಡಿಕೇರಿ, ಜೂ.17: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 18 ರಿಂದ 28 ರ ವಯೋಮಿತಿಯೊಳಗಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜೀವರಕ್ಷಕ ಈಜು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜೀವರಕ್ಷಕ ಈಜು ತರಬೇತಿಗೆ ತಾ. 23 ರ ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ 08272-228985 ರಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ.