ಸಿದ್ದಾಪುರ, ಜೂ. 24: ಕೊಡಗು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವಾರ್ಷಿಕ ಮಹಾಸಭೆಯು ತಾ. 26 ರಂದು ಸಿದ್ದಾಪುರ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿ. ಸಾಬು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ದೊರೆಯಬೇಕಾದ ಸೌಲಭ್ಯಗಳು ವ್ಯವಸ್ಥಿತವಾಗಿ ಸಿಗುತ್ತಿಲ್ಲ. ವಿಮಾ ಯೋಜನೆ ಸೇರಿದಂತೆ ಇತರ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸಲು ಸಂಘವು ಪ್ರಯತ್ನಿಸುತ್ತಿದೆ. ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದೆ. ವಾರ್ಷಿಕ ಸಭೆಯಲ್ಲಿ ಸರಕಾರದ ಸೌಲಭ್ಯಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.
ಕಾರ್ಮಿಕ ಮುಖಂಡ ಎನ್.ಡಿ. ಕುಟ್ಟಪ್ಪ ಮಾತನಾಡಿ, ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸುಮಾರು ರೂ. 3 ಸಾವಿರ ಕೋಟಿ ಹಣವಿದ್ದು, ಇದು ವಿವಿಧ ಸ್ತರಗಳ ಕಟ್ಟಡ ಕಾರ್ಮಿಕರ ಸೌಲಭ್ಯಕ್ಕೆ ಮೀಸಲಿರಿಸ ಲಾಗಿದೆ. ಆದರೆ ಕಾರ್ಮಿಕರಿಗೆ ಮಾಹಿತಿ ಕೊರತೆ ಹಾಗೂ ಸರಕಾರದ ಕಾರ್ಮಿಕ ವಿರೋಧ ನೀತಿಯಿಂದ ಅರ್ಹರಿಗೆ ಸಿಗುತ್ತಿಲ್ಲ. ಸಂಘಟನೆಯ ಮೂಲಕ ಸೌಲಭ್ಯವನ್ನು ಪಡೆಯಲು ಹೋರಾಟ ರೂಪಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಪೌಲೋಸ್, ಮುಸ್ತಫ, ವೈಜು ಇದ್ದರು.