ಸೋಮವಾರಪೇಟೆ, ಜೂ. 7: ಸಮೀಪದ ಶಾಂತಳ್ಳಿ ಗ್ರಾಮದ ಶ್ರೀ ಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಗೆ ಉದ್ಯಮಿ ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ ಅವರು ರೂ. 10 ಧನಸಹಾಯ ನೀಡಿದರು.

ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂಗಪ್ಪ ಅವರಿಗೆ ರೂ. 10 ಲಕ್ಷದ ಚೆಕ್ ವಿತರಿಸಿದರು. ಶಾಲೆಗಳು ಅಭಿವೃದ್ಧಿ ಹೊಂದಿ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ದೊರಕಿಸುವ ನಿಟ್ಟಿನಲ್ಲಿ ಧನ ಸಹಾಯ ಮಾಡಿರುವದಾಗಿ ರವೀಂದ್ರ ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.