ಕೂಡಿಗೆ, ಮೇ 17: ಕೂಡಿಗೆಯಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಮತ್ತು ಕಾರ್ಪೋರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ ಸದ್ಗುರು ಅಪ್ಪಯ್ಯ ಪ್ರೌಢಶಾಲೆಯಲ್ಲಿ ಗ್ರಾಮ ದತ್ತು ಸ್ವೀಕಾರ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಪೋರೇಷನ್ ಪ್ರಧಾನ ಕಚೇರಿ ಮಹಾ ಪ್ರಬಂಧಕ ವಿ. ತಂಗರಾಜು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಪೋರೇಷನ್ ಬ್ಯಾಂಕ್ ಮೈಸೂರು ವಲಯ ಮುಖ್ಯಸ್ಥ ಎಂ. ರಂಗಸ್ವಾಮಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಹಿಸಿದ್ದರು. ಕೂಡಿಗೆ ಕಾಬ್‍ಸೆಟ್‍ನ ನಿರ್ದೇಶಕ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ನಾಬಾರ್ಡ್ ಮೇಲ್ವಿಚಾರಕ ಎಂ.ಸಿ. ನಾಣಯ್ಯ, ತಾಲೂಕು ತಹಶೀಲ್ದಾರ್ ಶಿವಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾಲೀಲಾ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ಕೂಡಿಗೆ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್, ಕಾರ್ಪೋರೇಷನ್ ಬ್ಯಾಂಕ್ ಸ್ವ-ಉದ್ಯೋಗ ಸಂಸ್ಥೆಯ ಮುಖ್ಯಸ್ಥ ಲಿಂಗಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಇದ್ದರು.