ಮಡಿಕೇರಿ, ಜೂ. 27: ಮಡಿಕೇರಿ ತಾ.ಪಂ. ತ್ರೈಮಾಸಿಕ ಕೆ.ಡಿ.ಪಿ. ಸಭೆಯು ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಅವರ ಉಪಸ್ಥಿತಿಯಲ್ಲಿ ತಾ. 29 ರಂದು ಬೆಳಿಗ್ಗೆ 10.30 ಗಂಟೆಗೆ ತಾ.ಪಂ. ಕಚೇರಿ ಪಕ್ಕದಲ್ಲಿರುವ ಎಸ್.ಜಿ.ಎಸ್.ವೈ ಕಟ್ಟಡದ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ.ಎನ್.ಜೀವನ್ ಕುಮಾರ್ ತಿಳಿಸಿದ್ದಾರೆ.