ಸೋಮವಾರಪೇಟೆ,ಜೂ.26: ಶ್ರೀ ರವಿಶಂಕರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ತಾ. 28ರಿಂದ (ನಾಳೆಯಿಂದ) ಸುದರ್ಶನ ಕ್ರಿಯಾ ಯೋಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಚಾಲಕಿ ರಾಗಿಣಿ ತಿಳಿಸಿದ್ದಾರೆ.

ತಾ. 28ರಿಂದ ಜುಲೈ 3ರವರೆಗೆ ಬೆಳಿಗ್ಗೆ 5.30ರಿಂದ 7.30ರ ತನಕ ಸೋಮವಾರಪೇಟೆಯ ಆಲೋಕ ಸಭಾಂಗಣ, ಸಂಜೆ 5.30ರಿಂದ 7.30ರವರೆಗೆ ಶಾಂತಳ್ಳಿ ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ಶಿಬಿರ ಆಯೋಜಿಸ ಲಾಗಿದೆ. ಒಂದು ವಾರಗಳ ಕಾಲ ನಡೆಯುವ ಶಿಬಿರದಲ್ಲಿ ಧ್ಯಾನ, ಯೋಗಾಸನ, ಪ್ರಾಣಾಯಾಮ, ಸುದರ್ಶನ ಕ್ರಿಯೆ ಸೇರಿದಂತೆ ಇತರ ಪ್ರಾಕಾರಗಳ ಬಗ್ಗೆ ತರಬೇತಿ ನೀಡಲಾಗುವದು. ಹೆಚ್ಚಿನ ಮಾಹಿತಿಗೆ ಮೊ; 9964618363, 9448972939 ಸಂಖ್ಯೆಗಳನ್ನು ಸಂಪರ್ಕಿಸ ಬಹುದಾಗಿದೆ.