ಮಡಿಕೇರಿ, ಜೂ. 22: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಇವರ ವತಿಯಿಂದ, ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ 2016ನೇ ಸಾಲಿನಲ್ಲಿ ನಡೆಸುವ ಸಾಮಾನ್ಯ ಲಿಖಿತ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಕಾರ್ಯಕ್ರಮವನ್ನು ಮಡಿಕೇರಿಯಲ್ಲಿ ತಾ. 29 ರಿಂದ ಜುಲೈ 2 ರವರೆಗೆ ಆಯೋಜಿಸಲಾಗಿದೆ.

ಪರೀಕ್ಷಾ ಪೂರ್ವ ತರಬೇತಿಯಲ್ಲಿ ನಿಗದಿಪಡಿಸಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ಗುಣಮಟ್ಟದ ತರಬೇತಿಯನ್ನು ನೀಡಲಾಗುವದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಅಥವಾ ಅಂಚೆ ಕಾರ್ಡಿನ ಮುಖಾಂತರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ. ಜಗನ್ನಾಥ್ ತಿಳಿಸಿದ್ದಾರೆ.