ಕೂಡಿಗೆ, ಜೂ. 24: ಇಲ್ಲಿಗೆ ಸಮೀಪದ ಕೂಡುಮಂಗಳೂರು ಗ್ರಾಮದಲ್ಲಿರುವ ಕಾರ್ಪೋರೇಶನ್ ಬ್ಯಾಂಕ್‍ನಲ್ಲಿ 3 ವರ್ಷ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಇದೀಗ ವರ್ಗಾವಣೆಗೊಂಡ ಶಶಿಕುಮಾರ್ ಅವರಿಗೆ ಸ್ಥಳೀಯ ಸ್ನೇಹಿತರ ಬಳಗದ ವತಿಯಿಂದ ಬೀಳ್ಕೊಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡುಮಂಗಳೂರು ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ಕೆ. ಹೇಮಂತ್‍ಕುಮಾರ್ ವಹಿಸಿದ್ದರು. ಈ ಸಂದರ್ಭ ಸಹಕಾರ ಬ್ಯಾಂಕ್‍ನ ನಿರ್ದೇಶಕ ಟಿ.ಪಿ. ಹಮೀದ್, ಕೂಡಿಗೆ ಡೈರಿಯ ಉದ್ಯೋಗಿ ಕುಮಾರ್, ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಟಿ.ಕೆ ವಿಶ್ವನಾಥ್, ಮಂಜಯ್ಯ, ರಂಗಸ್ವಾಮಿ, ಸೋಮಶೇಖರ್, ಉದ್ಯಮಿ ರಘು, ವಿಶ್ವೇಶ್ವರಯ್ಯ ಉಪಸ್ಥಿತರಿದ್ದರು.