ನಾಪೆÇೀಕ್ಲು, ಜೂ. 27:ಕೊಡಗು ಜಿಲ್ಲೆ ಶಾಂತಿಯ ಕೇಂದ್ರವಾಗಿದೆ. ಇಲ್ಲಿ ಯಾವದೇ ಜಾತಿ, ಧರ್ಮಗಳ ಬಗ್ಗೆ ಬಿನ್ನಾಭಿಪ್ರಾಯಗಳಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಕಿಡಿಗೇಡಿಗಳು ಜಿಲ್ಲೆಯ ಶಾಂತಿಯನ್ನು ಕೆಡಿಸಲು ಪ್ರಯತ್ನಿಸುತ್ತಿದ್ದಾರೆ. ಇವರ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ. ಮನ್ಸೂರ್ ಅಲಿ ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲೆ ಶಾಂತಿಯ ಸಂಕೇತವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಮತ್ತು ಕಾನೂನು ಬಾಹಿರ ಚಟುವಟಿಕೆಗಳ ಪರಿಣಾಮವಾಗಿ ಜಿಲ್ಲೆಗೆ ಕೆಟ್ಟ ಹೆಸರು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಜಿಲ್ಲೆಯ ಪ್ರವಾಸೋದÀ್ಯಮಕ್ಕೆ ಧಕ್ಕೆ ಬರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.
ಪೆÇಲೀಸರಿಗೂ ಸೂಕ್ತ ಭದ್ರತೆಯಿಲ್ಲ?
ಸಮಾಜ, ಜನರನ್ನು ರಕ್ಷಿಸಲು ಸರಕಾರ ಪೆÇಲೀಸರನ್ನು ನಿಯೋಜನೆಗೊಳಿಸಿದೆ. ಆದರೆ ಪೆÇಲೀಸರ ಮೇಲೆಯೇ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ದೌರ್ಜನ್ಯ ನಡೆಸುತ್ತಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿದೆ. ಕಾನೂನನ್ನು ರಕ್ಷಿಸುವ ಪೆÇಲೀಸರಿಗೆ ಭದ್ರತೆಯಿಲ್ಲ ಎಂಬ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಈ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸದಸ್ಯ ಪಿ.ಎಂ.ರಶೀದ್, ಇಬ್ರಾಹಿಂ ಎಂ.ಎಸ್, ಅಬೂಬಕ್ಕರ್ ಎಂ.ಎಂ ಇದ್ದರು.