ಕುಶಾಲನಗರ, ಮೇ 20: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಶ್ರಮವಹಿಸಿ ಅಭ್ಯಾಸಗೈದಲ್ಲಿ ಉತ್ತಮ ಭವಿಷ್ಯ ಹೊಂದಲು ಸಾಧ್ಯ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಹಾಗೂ 2015-16ನೇ ಸಾಲಿನ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ಪೋಷಿಸಿ ಅಭಿವೃದ್ಧಿಪಡಿಸಿಕೊಂಡು ಶಿಕ್ಷಕರ ಮಾರ್ಗದರ್ಶನದೊಂದಿಗೆ ಹೊಸ ಚಿಂತನೆಗಳು, ಆಲೋಚನೆಗಳನ್ನು ಹೊಂದುವ ಮೂಲಕ ದೇಶದ ಪ್ರಗತಿ ಬಗ್ಗೆ ಕನಸು ಕಾಣುವಂತಾಗಬೇಕು ಎಂದು ಅವರು ಕರೆ ನೀಡಿದರು.
ಕುಶಾಲನಗರ ಶ್ರೀ ಗಣಪತಿ ದೇವಾಲಯ ಸೇವಾ ಸಮಿತಿಯ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಹೆಚ್.ವಿ. ಶಿವಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ. ವೆಂಕಟೇಶ್ ಬೆಮ್ಮತ್ತಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಕಾರ್ಯಕ್ರಮದಲ್ಲಿ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.