ಮಡಿಕೇರಿ, ಜು. ೭: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದಲ್ಲದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಮಡಿಕೇರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾ. ೫ ರಂದು ರಾತ್ರಿ ಸುಮಾರು ೭.೩೦ ಗಂಟೆಗೆ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸಿ.ವಿ. ಶ್ರೀಧರ್ ಹಾಗೂ ಸಿಬ್ಬಂದಿಗಳಾದ ವಿಜಯಕುಮಾರ್ ಹೊಸಮನಿ, ಕಾಶಿನಾಥ್ ಜಿ.ಕೆ. ಇವರುಗಳು ಮಡಿಕೇರಿ ನಗರದ ಜಿ.ಟಿ. ವೃತ್ತದ ಬಳಿ ೪ಐದÀನೇ ಪುಟಕ್ಕೆ
(ಮೊದಲ ಪುಟದಿಂದ) ಸಂಚಾರ ನಿಯಂತ್ರಣದ ಕರ್ತವ್ಯದಲ್ಲಿದ್ದಾಗ ಕಾರು (ಕೆಎ- ೧೨ ಎಂಸಿ - ೧೭೫೩) ಅತೀ ವೇಗದಿಂದ ಬರುತ್ತಿರುವುದನ್ನು ಗಮನಿಸಿ ಪರಿಶೀಲನೆಗಾಗಿ ಕಾರನ್ನು ನಿಲ್ಲಿಸಿದ್ದಾರೆ. ಬಳಿಕ ಪರಿಶೀಲಿಸಿದಾಗ ಕಾರಿನ ಚಾಲಕ ಮೊಣ್ಣಂಗೇರಿಯ ಹರೀಶ್ ಬಿ.ಕೆ. ಎಂಬಾತ ಮದ್ಯಪಾನ ಮಾಡಿರುವುದು ಕಂಡುಬAದಿದೆ. ನಂತರ ಆಲ್ಕೋಮೀಟರ್‌ನಲ್ಲಿ ಪರಿಶೀಲಿಸಲು ಪ್ರಯತ್ನಿಸಿದಾಗ ಹರೀಶ್ ಕರ್ತವ್ಯದಲ್ಲಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ದೂಡಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಈ ಕುರಿತು ಸಿ.ವಿ. ಶ್ರೀಧರ್, ಚಾಲಕನಾದ ಹರೀಶ್ ಬಿ.ಕೆ. ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಪೊಲೀಸರು ಕಲಂ ೧೩೨, ೧೨೧ (೧), ೩೫೨ ಬಿಎನ್‌ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಮದ್ಯಪಾನ ಮಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವ ಸಂದರ್ಭ ಅಪಘಾತವಾದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮದ್ಯಪಾನ ಮಾಡಿ ಅತೀವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಆರೋಪಿ ಹರೀಶ್ (೪೬)ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.