ಕೂಡಿಗೆ, ಜು. ೬: ಕುಶಾಲನಗರ ತಾಲೂಕು ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ - ಮಾವಿನಹಳ್ಳ ಸೇತುವೆ ಪಕ್ಕದಲ್ಲಿ ತೀವ್ರ ಮಳೆಯಿಂದಾಗಿ ಬರೆ ಕುಸಿತ ಉಂಟಾಗಿ ರಸ್ತೆ ಸಂಚಾರ ಅಪಾಯದ ಸ್ಥಿತಿಯಲ್ಲಿತ್ತು.

ಸ್ಥಳಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಭೋಜರಾಜ್, ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆಯ ವತಿಯಿಂದ ತಾತ್ಕಾಲಿಕವಾಗಿ ದುರಸ್ತಿ ಕಾರ್ಯಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.