ಸೋಮವಾರಪೇಟೆ, ಜು. ೬: ಕರ್ನಾಟಕ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಇತ್ತೀಚೆಗೆ ಮೈಸೂರಿನ ಕಿರು ರಂಗಮAದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಮೀಪದ ಕರ್ಕಳ್ಳಿ ಗ್ರಾಮದ ಪ್ರಗತಿಪರ ಕೃಷಿಕರಾದ ನಿರ್ಮಲ ಜಯಪ್ರಕಾಶ್ ಅವರಿಗೆ ಕೃಷಿ ಕ್ಷೇತ್ರದ ಸಾಧನೆಗಾಗಿ ಪದ್ಮಭೂಷಣ ಯಶೋಧರಮ್ಮ ದಾಸಪ್ಪ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿರ್ಮಲ ಜಯಪ್ರಕಾಶ್ ಅವರು ನೂರಾರು ಔಷಧೀಯ ಗಿಡಗಳನ್ನು ಬೆಳೆಸಿ, ವಿವಿಧ ತಳಿಯ ಹಣ್ಣುಗಳನ್ನು ಬೆಳೆಸಿ, ಮೂರು ದಶಕಗಳಿಂದ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿ ಸಾಧನೆ ಮಾಡಿರುವುದನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.