ಮಡಿಕೇರಿ, ಜು. ೬: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ೨೦೨೫-೨೬ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. ೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುತ್ತದೆ. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪೆನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟಿçÃಕೃತ ಬ್ಯಾಂಕ್‌ಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟಿçÃಕೃತ ಬ್ಯಾಂಕ್‌ಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.

೨೦೨೪ನೇ ಸಾಲಿನ ಮುಂಗಾರು ಹಂಗಾಮಿನ ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ ಇಂತಿದೆ. ಭತ್ತ (ನೀರಾವರಿ) ಬೆಳೆ ಸಾಮಾನ್ಯ ವಿಮಾ (ಪ್ರತಿ ಹೆಕ್ಟೇರ್‌ಗೆ) ವಿಮಾ ಮೊತ್ತ ೯೩೨೫೦, ರೈತರ ವಿಮಾ ಕಂತು (ಶೇ. ೨), ರೈತರ ವಿಮಾ ಮೊತ್ತ ರೂ. ೧೮೬೫, ರೈತರ ವಿಮಾ ವಂತಿಕೆ (ಪ್ರತಿ ಎಕರೆಗೆ) ೭೪೬ ಆಗಿರುತ್ತದೆ. ನೋಂದಾಯಿಸಿಕೊಳ್ಳಲು ಆಗಸ್ಟ್ ೧೬ ಕೊನೆಯ ದಿನವಾಗಿದೆ.

ಭತ್ತ (ಮಳೆಯಾಶ್ರಿತ) ಸಾಮಾನ್ಯ ವಿಮಾ (ಪ್ರತಿ ಹೆಕ್ಟೇರ್‌ಗೆ) ವಿಮಾ ಮೊತ್ತ ರೂ. ೬೩೭೫೦, ರೈತರ ವಿಮಾ ಕಂತು ಶೇ. ೨ ರೈತರ ವಿಮಾ ಕಂತು ಮೊತ್ತ ರೂ. ೧೨೭೫, ರೈತರ ವಿಮಾ ವಂತಿಕೆ (ಪ್ರತಿ ಎಕರೆಗೆ) ರೂ. ೫೧೦ ಆಗಿದೆ. ನೋಂದಾಯಿಸಿಕೊಳ್ಳಲು ಆಗಸ್ಟ್ ೧೬ ಕೊನೆಯ ದಿನವಾಗಿದೆ.

ಮುಸುಕಿನ ಜೋಳ (ಮಳೆಯಾಶ್ರಿತ) ಸಾಮಾನ್ಯ ವಿಮಾ (ಪ್ರತಿ ಹೆಕ್ಟೇರ್‌ಗೆ) ವಿಮಾ ಮೊತ್ತ ರೂ. ೫೬೫೦೦, ರೈತರ ವಿಮಾ ಕಂತು ಶೇ. ೨, ರೈತರ ವಿಮಾ ಕಂತು ಮೊತ್ತ ರೂ. ೧೧೩೦ ರೈತರ ವಿಮಾ ವಂತಿಕೆ (ಪ್ರತಿ ಎಕರೆಗೆ) ರೂ. ೪೫೨ ಆಗಿದೆ. ನೋಂದಾಯಿಸಿಕೊಳ್ಳಲು ತಾ. ೩೧ ಕೊನೆಯ ದಿನವಾಗಿದೆ.

ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾAಶದಲ್ಲಿ ಪಡೆಯಬಹುದು. (hಣಣಠಿ://ತಿತಿತಿ.sಚಿmಡಿಚಿಞshಚಿಟಿe. ಞಚಿಡಿಟಿಚಿಣಚಿಞಚಿ.gov.iಟಿ) ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ, ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಈ ಯೋಜನೆಯನ್ನು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸದುಪಯೋಗಪಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ತಿಳಿಸಿದ್ದಾರೆ.