ಮಡಿಕೇರಿ, ಜು.೬ : ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆ ಕುರಿತ ಮಾಹಿತಿಯನ್ನು ಒಳಗೊಂಡ ವಸ್ತು ಪ್ರದರ್ಶನಕ್ಕೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ ಮತ್ತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಭಾನುವಾರ ಚಾಲನೆ ನೀಡಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿಯುಳ್ಳ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
ವಸ್ತು ಪ್ರದರ್ಶನ ಮಳಿಗೆಯಲ್ಲಿ ಅಳವಡಿಸಲಾದ ಗ್ಯಾರಂಟಿ ಸಮರ್ಪಣೆ ಅಭಿವೃದ್ಧಿಯ ಸಂಕಲ್ಪ, ನಾಡಿನ ಏಳು ಕೋಟಿ ಜನರ ಬೆಳಕು ಗ್ಯಾರಂಟಿ ಬದುಕು ಫಲಕ, ಸರ್ಕಾರದ ಯೋಜನೆಗಳಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಿಸಲು ಶಕ್ತಿ ಯೋಜನೆ, ಬಡ, ಹಿಂದುಳಿದ ಸೇರಿದಂತೆ ಎಲ್ಲಾ ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಎಲ್ಲಾ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ರೂ. ಎರಡು ಸಾವಿರ ಹಣ ನೀಡುವ ಗೃಹಲಕ್ಷಿö್ಮ ಯೋಜನೆ, ಜೊತೆಗೆ ಅನ್ನಭಾಗ್ಯ, ಪದವಿ, ಡಿಪ್ಲೊಮಾ ಪೂರ್ಣಗೊಳಿಸಿದ ಯುವಜನತೆಗೆ ಉದ್ಯೋಗ ಪಡೆಯಲು ಅನುಕೂಲವಾಗಲು ಪ್ರತಿ ತಿಂಗಳು ಪದವೀಧರರಿಗೆ ಮೂರು ಸಾವಿರ ರೂಪಾಯಿ ೪ಐದÀನೇ ಪುಟಕ್ಕೆ
(ಮೊದಲ ಪುಟದಿಂದ) ಹಾಗೂ ಡಿಪ್ಲೊಮೊ ಪದವೀಧÀರರಿಗೆ ರೂ.೧೫೦೦ ನೀಡುವ ಯುವನಿಧಿ, ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಗಣ್ಯರು ವೀಕ್ಷಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರಗಳನ್ನು ಒಳಗೊಂಡ ಸೆಲ್ಫಿ ಪಾಯಿಂಟ್‌ಗಳನ್ನು ವೀಕ್ಷಿಸಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಸಮಿತಿಯ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್ ಅವರು ಸೆಲ್ಫಿ ಪಾಯಿಂಟ್‌ಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡರು.
ಬಳಿಕ ಮಾತನಾಡಿದ ಧರ್ಮಜ ಉತ್ತಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಗ್ರಾಮೀಣ ಮಟ್ಟಕ್ಕೂ ಈ ಯೋಜನೆಯ ಮಾಹಿತಿ ದೊರೆಯುವಂತಾಗಬೇಕು ಎಂದರು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೇರಿದಂತೆ ಸರ್ಕಾರ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಕಲ್ಯಾಣ ಕಾರ್ಯಕ್ರಮವನ್ನು ಶ್ರೀ ಸಾಮಾನ್ಯರಿಗೆ ತಲುಪಿಸಲು ಶ್ರಮಿಸಿದೆ ಎಂದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಗಣ್ಯರು ಕೂಡ ಸೆಲ್ಫಿಪಾಯಿಂಟ್‌ನಲ್ಲಿ ಫೋಟೊ ತೆಗೆಸಿಕೊಂಡರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ಮಾಹಿತಿ ಒಳಗೊಂಡ ವಸ್ತು ಪ್ರದರ್ಶನವನ್ನು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದು, ತಾ ೮ ರವರೆಗೆ ವಸ್ತು ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ದೊರಕಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಒಳಗೊಂಡAತೆ ಸರ್ಕಾರದ ಜನಪರ ಯೋಜನೆಗಳ, ಅಭಿವೃದ್ಧಿ ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾಹಿತಿ ನೀಡಿದರು.
ಈ ವಸ್ತು ಪ್ರದರ್ಶನದಲ್ಲಿ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆ ಒಳಗೊಂಡ ಪುಸ್ತಕವನ್ನು ರಾಜ್ಯದ ಮುಖ್ಯಮಂತ್ರಿ ಅವರಿಂದ ಪಡೆಯುವ ರೀತಿಯಲ್ಲಿ ಬಿಂಬಿಸಲಾಗಿರುವ ಸೆಲ್ಪಿ ಪಾಯಿಂಟ್‌ನಲ್ಲಿ ಹಲವಾರು ಮಂದಿ ಸೆಲ್ಫಿ ತೆಗೆದುಕೊಂಡರು. ಕೆಎಸ್‌ಆರ್‌ಟಿಸಿ ಸಹಾಯಕ ಸಂಚಾರ ಅಧೀಕ್ಷರರಾದ ಎ. ಈರಸಪ್ಪ, ಸಂಚಾರ ನಿಯಂತ್ರಕ ಮಲ್ಲಿಕಾರ್ಜುನ, ಅಶೋಕ್ ಕುಮಾರ್ ನಾಯಕ್ ಇತರರು ಇದ್ದರು.