ಮಡಿಕೇರಿ, ಜು. ೭: ನಗರದ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ಮಂಟಪ ಸಮಿತಿ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಆಯ್ಕೆಯಾಗಿದ್ದಾರೆ.
ದೇವಾಲಯ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಜಗದೀಶ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎನ್. ಮುದ್ದುರಾಜು, ಖಜಾಂಜಿಯಾಗಿ ಪ್ರದೀಪ್ ಆಯ್ಕೆಯಾದರು. ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ಮಂಟಪ ಸಮಿತಿ ೫೦ನೇ ವರ್ಷದ ಸಂಭ್ರಮದಲ್ಲಿದ್ದು, ಎಲ್ಲರ ಸಹಕಾರದೊಂದಿಗೆ ಅದ್ದೂರಿ ಮಂಟಪ ರಚಿಸಲಾಗುವುದು. ಜನೋತ್ಸವಕ್ಕೆ ಸಹಕಾರ ನೀಡಲಾಗುವುದು’ ಎಂದು ಅಧ್ಯಕ್ಷ ಬಿ.ಕೆ. ಜಗದೀಶ್ ತಿಳಿಸಿದ್ದಾರೆ.