ಸಿದ್ದಾಪುರ, ಜು. ೭ : ಆಟೋ ಚಾಲಕರು ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸಿದ್ದಾಪುರ ನೂತನ ಠಾಣಾಧಿಕಾರಿ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಸಿದ್ದಾಪುರದ ಸೆಂಟನರಿ ಸಭಾಂಗಣದಲ್ಲಿ ಸಿದ್ದಾಪುರದ ಆಟೋ ಚಾಲಕರ ಹಾಗೂ ಮಾಲೀಕರ ಸಭೆಯಲ್ಲಿ ಮಾತನಾಡಿದ ಮಂಜುನಾಥ್, ಆಟೋ ಚಾಲಕರು ಮದ್ಯಪಾನ ಸೇವಿಸಿ ವಾಹನ ಚಲಾಯಿಸಿದಂತೆ, ಸಮವಸ್ತçವನ್ನು ಧರಿಸಿವಂತೆ ಹಾಗೂ ನಿಗದಿತ ಸ್ಥಳದಲ್ಲಿ ತಮ್ಮ ಆಟೋರಿಕ್ಷಾಗಳನ್ನು ನಿಲ್ಲಿಸುವಂತೆ ತಿಳಿಸಿದರು. ಬಸ್ ನಿಲ್ದಾಣದ ಸುತ್ತಲೂ ಅನಗತ್ಯವಾಗಿ ಸುತ್ತಾಡಿಕೊಂಡು ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ವಾಹನ ಚಾಲನೆ ಮಾಡುವ ಪ್ರತಿಯೊಬ್ಬ ಚಾಲಕನು ತಮ್ಮ ವಾಹನದ ಸಂಪೂರ್ಣ ದಾಖಲಾತಿಗಳನ್ನು ಸಮರ್ಪಕವಾಗಿಟ್ಟುಕೊಳ್ಳಬೇಕು. ಇದಲ್ಲದೆ ಶಾಲೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಆಟೋರಿಕ್ಷಾಗಳು ಹೆಚ್ಚಿನ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವುದು ಕಂಡುಬAದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.

ಪ್ರತಿಯೊಂದು ಆಟೋ ಮಾಲೀಕರು ಹಾಗೂ ಚಾಲಕರು ತಮ್ಮ ವಾಹನಗಳಿಗೆ ಪೊಲೀಸ್ ಠಾಣೆಯಿಂದ ನೋಂದಣಿ ಸಂಖ್ಯೆಯನ್ನು ಪಡೆಯಬೇಕು. ಸಿದ್ದಾಪುರದ ಮುಖ್ಯರಸ್ತೆಯಲ್ಲಿ ಪಾರ್ಕಿಂಗ್ ಮಾಡಲು ಅವಕಾಶವಿಲ್ಲ. ಸಂಚಾರ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಿಕೊಂಡು ಟ್ರಾಫಿಕ್ ಸಮಸ್ಯೆಗಳಿಗೆ ಅವಕಾಶ ನೀಡಬಾರದು ಎಂದು ಸಲಹೆ ನೀಡಿದರು.

ಈ ಸಂದರ್ಭ ಆಟೋ ಚಾಲಕರು ಮಾತನಾಡಿ, ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಕೆಲವು ಆಟೋ ಚಾಲಕರು ಸುತ್ತಾಡುತ್ತಾ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದು, ನಿಗದಿತ ಸ್ಥಳದಲ್ಲಿ ನಿಲ್ಲಿಸಿದ ಆಟೋ ಚಾಲಕರಿಗೆ ಸಮಸ್ಯೆಯಾಗುತ್ತದೆ ಎಂದು ತಿಳಿಸಿದರು. ಸಿದ್ದಾಪುರದಲ್ಲಿ ಹೆಚ್ಚಿನ ಆಟೋಗಳಿದ್ದು ಮತ್ತೊಂದು ಆಟೋ ನಿಲ್ದಾಣಕ್ಕೆ ಸ್ಥಳ ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಠಾಣಾಧಿಕಾರಿ ಈ ಬಗ್ಗೆ ಸಿದ್ದಾಪುರ ಗ್ರಾಮ ಪಂಚಾಯಿತಿಯ ಬಳಿ ಚರ್ಚಿಸಲಾಗುವುದೆಂದು ತಿಳಿಸಿದರು. ಆಟೋ ಚಾಲಕರ ಹಾಗೂ ಮಾಲೀಕರ ಸಮಸ್ಯೆಗಳನ್ನು ಆಲಿಸಿದ ಠಾಣಾಧಿಕಾರಿ ಮಂಜುನಾಥ್ ಮುಂದಿನ ಎರಡು ವಾರಗಳ ಒಳಗೆ ಚಾಲಕರು ತಮ್ಮ ಎಲ್ಲಾ ದಾಖಲಾತಿಗಳನ್ನು ಸಮರ್ಪಕವಾಗಿ ಸರಿಪಡಿಸಿಕೊಳ್ಳಲು ಕಾಲಾವಕಾಶ ನೀಡಿದರು. ಸಭೆಯಲ್ಲಿ ಸಿದ್ದಾಪುರದ ಕ್ರೆöÊಂ ಠಾಣಾಧಿಕಾರಿ ಶಿವಣ್ಣ ಮತ್ತು ಸಿಬ್ಬಂದಿಗಳು ಹಾಜರಿದ್ದರು. ವರದಿ : ವಾಸು