ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ : ದಿನೇಶ್ ಗುಂಡೂರಾವ್
ಬೆAಗಳೂರು, ಜು. ೭: ರಾಜ್ಯ ಸರ್ಕಾರ ಹಠಾತ್ ಸಾವುಗಳನ್ನು ಅಧಿಸೂಚಿತ ಕಾಯಿಲೆ ಎಂದು ಸೋಮವಾರ ಘೋಷಿಸಿದ್ದು, ಅಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಿದೆ. ರಾಜ್ಯದಲ್ಲಿ ೧೫ ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ರಾಜ್ಯದಲ್ಲಿ, ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವರು, ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದರು. ಹಠಾತ್ ಸಾವುಗಳನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ನಾವು ನಿರ್ಧರಿಸಿದ್ದೇವೆ. ಆಸ್ಪತ್ರೆಗಳ ಹೊರಗೆ ಹಠಾತ್ ಸಾವು ಸಂಭವಿಸಿದರೆ ಅದನ್ನು ಸರ್ಕಾರಕ್ಕೆ ತಿಳಿಸಬೇಕು ಎಂದು ಸಚಿವರು ಹೇಳಿದರು. ಹುಟ್ಟಿನಿಂದಲೇ ರೋಗಗಳನ್ನು ಹೊಂದಿರುವ ಜನ ಇರುವುದರಿಂದ ಸುಮಾರು ೧೫ ವರ್ಷ ವಯಸ್ಸಿನ ಮಕ್ಕಳು ಸೇರಿದಂತೆ ಹೆಚ್ಚಿನ ಜನರನ್ನು ವರ್ಷಕ್ಕೊಮ್ಮೆಯಾದರೂ ತಪಾಸಣೆ ಮಾಡುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ಹೃದಯಾಘಾತ ಮತ್ತು ಹಠಾತ್ ಸಾವುಗಳಿಗೆ ಕಾರಣವಾಗುವ ರೋಗಗಳ ಕುರಿತು ಪಠ್ಯಪುಸ್ತಕಗಳಲ್ಲಿ ಪ್ರತ್ಯೇಕ ಪಠ್ಯ ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚಿಸಲಾಗುವುದು ಎಂದು ಸಚಿವರು ತಿಳಿಸಿದರು. ಸಿಪಿಆರ್ ಕುರಿತು ಜನರಿಗೆ ತರಬೇತಿ ನೀಡಲು ಸಹ ನಿರ್ಧರಿಸಲಾಗಿದೆ. ಇದಲ್ಲದೆ, ರಾಜ್ಯದ ೮೬ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಈ ವರ್ಷ ತಾಲೂಕು ಮಟ್ಟದ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು. ಹಠಾತ್ ಹೃದಯಾಘಾತದಿಂದ ಬಳಲುತ್ತಿರುವ ಜನರಿಗೆ ಚಿಕಿತ್ಸೆ ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಹಠಾತ್ ಹೃದಯಾಘಾತ ಮತ್ತು ಕೋವಿಡ್ -೧೯ ಸೋಂಕು ಮತ್ತು ಲಸಿಕೆಯೊಂದಿಗೆ ಅವುಗಳ ಸಂಭಾವ್ಯ ಸಂಬAಧದ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯ ವರದಿಯನ್ನು ಉಲ್ಲೇಖಿಸಿ, ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ದಿನೇಶ್ ಗೂಂಡುರಾವ್ ಹೇಳಿದರು.
ಕಲುಷಿತ ನೀರು ಸೇವಿಸಿ ಮೂವರ ಸಾವು
ಯಾದಗಿರಿ, ಜು. ೭: ಜಿಲ್ಲೆಯ ತಿಪ್ಪನಡಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ನಂತರ ಅತಿಸಾರ ಮತ್ತು ವಾಂತಿಯ ಲಕ್ಷಣಗಳಿಂದಾಗಿ ಕಳೆದ ಒಂದು ವಾರದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಐದು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರು ಇತರ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಅವರ ಸಾವುಗಳು ನೀರಿನ ಮಾಲಿನ್ಯಕ್ಕೆ ನೇರವಾಗಿ ಸಂಬAಧಿಸಿಲ್ಲ ಎಂದು ಯಾದಗಿರಿಯ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಅತಿಸಾರ ಮತ್ತು ವಾಂತಿಯ ಲಕ್ಷಣಗಳಿರುವ ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಈಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು. ಆರೋಗ್ಯ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.
ಮೂವರು ನೈಜೀರಿಯನ್ನರ ಬಂಧನ : ೪ ಕೋಟಿ ರೂ ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು, ಜು. ೭: ಕೆಂಪೇಗೌಡ ಅಂತರರಾಷ್ಟಿçÃಯ ವಿಮಾನ ನಿಲ್ದಾಣದ ಬಳಿ ಮೂವರು ನೈಜೀರಿಯನ್ನರನ್ನು ಬಂಧಿಸಲಾಗಿದ್ದು, ಅವರಿಂದ ೨.೮ ಕೆಜಿ ಸಿಂಥೆಟಿಕ್ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಬಂಧಿತರಿAದ ಸುಮಾರು ೪೦೦ ಕೆಜಿ ಹೈಡ್ರೋ ಗಾಂಜಾವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಮತ್ತು ಈ ಡ್ರಗ್ಸ್ ಮೌಲ್ಯ ೪ ಕೋಟಿ ರೂ.ಗೂ ಹೆಚ್ಚು ಎಂದು ಪೊಲೀಸರು ಹೇಳಿದ್ದಾರೆ. ಬಂಧಿತ ವಿದೇಶಿ ಪ್ರಜೆಗಳು ವೈದ್ಯಕೀಯ ವೀಸಾದಲ್ಲಿ ಭಾರತಕ್ಕೆ ಆಗಮಿಸಿದ್ದರು ಮತ್ತು ಅವರು ವೀಸಾ ಅವಧಿ ಮೀರಿ ನೆಲೆಸಿರುವುದು ಕಂಡುಬAದಿದೆ ಎಂದು ಬೆಂಗಳೂರು ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ಅವರು ತಿಳಿಸಿದ್ದಾರೆ. ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಮತ್ತು ಶಂಕಿತ ಚಲನವಲನಗಳ ಕಣ್ಗಾವಲಿನ ಆಧಾರದ ಮೇಲೆ, ನಮ್ಮ ತಂಡ ವಿದೇಶಿ ಪ್ರಜೆಗಳನ್ನು ಒಳಗೊಂಡ ಅನುಮಾನಾಸ್ಪದ ಚಟುವಟಿಕೆಯನ್ನು ಗುರುತಿಸಿದೆ ಎಂದು ಬಾಬಾ ವರದಿಗಾರರಿಗೆ ಹೇಳಿದ್ದಾರೆ. ರಾಜನುಕುಂಟೆಯಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ, ೨.೮ ಕೆಜಿ ಎಂಡಿಎAಎ, ಸುಮಾರು ೪೦೦ ಕೆಜಿ ಹೈಡ್ರೋ ಗಾಂಜಾ, ೨ ಲಕ್ಷ ರೂ.ಗೂ ಹೆಚ್ಚು ನಗದು, ಏಳು ಮೊಬೈಲ್ ಫೋನ್ಗಳು, ಪ್ಯಾಕೇಜಿಂಗ್ ಸಾಮಗ್ರಿಗಳು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯ ಹಿಂದೆ ದೊಡ್ಡ ಜಾಲವಿರುವುದು ಕಂಡುಬರುತ್ತಿದೆ. ಮಾದಕ ದ್ರವ್ಯಗಳ ಮೂಲ, ಕಾರ್ಯ ವಿಧಾನ ಮತ್ತು ಉದ್ದೇಶಿತ ಪೂರೈಕೆ ತಾಣಗಳನ್ನು ಪತ್ತೆಹಚ್ಚಲು ನಮ್ಮ ತಂಡ ಮತ್ತಷ್ಟು ತನಿಖೆ ನಡೆಸುತ್ತದೆ ಎಂದು ಅವರು ತಿಳಿಸಿದ್ದಾರೆ.