ಮಡಿಕೇರಿ, ಜು. ೭: ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಅವರು ಆಯ್ಕೆಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹಿಂದಿನ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆ ಪ್ರಕ್ರಿಯೆ ನಡೆಸಿ ಪ್ರಕಾಶ್ ಆಚಾರ್ಯ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ವಿ.ಪಿ. ಸುರೇಶ್, ಪ್ರಮುಖರಾದ ಕೊಲ್ಯದ ಗಿರೀಶ್, ಸದಾ ಮುದ್ದಪ್ಪ, ಮುಕ್ಕಾಟಿರ ಸಂದೀಪ್, ವಿಶು ರಂಜಿ ಇನ್ನಿತರರು ನೇಮಕಾತಿ ಪತ್ರವನ್ನು ಪ್ರಕಾಶ್ ಅವರಿಗೆ ಹಸ್ತಾಂತರಿಸಿದರು.