ಗೋಣಿಕೊಪ್ಪಲು, ಜು. ೮: ಇತಿಹಾಸ ಪ್ರಸಿದ್ಧ ಪೊನ್ನಂಪೇಟೆ ತಾಲೂಕು ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಣಿಕೊಪ್ಪ ವೀರಾಜಪೇಟೆ ಮುಖ್ಯ ರಸ್ತೆಯ ಬಳಿ ಇರುವ ೨ ವರ್ಷಕ್ಕೊಮ್ಮೆ ನಡೆಯುವ ಶ್ರೀ ವನಭದ್ರಕಾಳಿ ಉತ್ಸವಕ್ಕೆ ಜನಸಾಗರ ಹರಿದು ಬಂತು. ಮುಂಜಾನೆಯಿAದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಭಕ್ತರು ಜಮಾವಣೆಗೊಂಡಿದ್ದರು. ೮ ಗಂಟೆ ಸುಮಾರಿಗೆ ಮುಖ್ಯ ರಸ್ತೆಯಲ್ಲಿ ದೇವರ ಆಗಮನಗೊಂಡು ನಂತರ ದೇವಾಲಯದ ಆವರಣಕ್ಕೆ ಪ್ರವೇಶಿಸಿತು. ದೇವಸ್ಥಾನಕ್ಕೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ದಂಪತಿ, ವಿಧಾನ ಪರಿಷತ್ ಸದಸ್ಯರಾದ ಮಂಡೇಪAಡ ಸುಜಾಕುಶಾಲಪ್ಪ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಸರತಿ ಸಾಲಿನಲ್ಲಿ ಆಗಮಿಸಿದ ಭಕ್ತರು ತಮ್ಮ ಹರಕೆ ತೀರಿಸಿ, ದೇವರ ದರ್ಶನ ಪಡೆದರು. ಶಾಸಕರ ಭೇಟಿ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ಕೊಕ್ಕಂಡ ರೋಷನ್, ಬೂತ್ ಅಧ್ಯಕ್ಷ ಪುಲಿಯಂಡ ರೋಷನ್, ವಕೀಲ ಅಪ್ಪಣ್ಣ, ದೇವಾಲಯ ಸಮಿತಿಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಮುಂಜಾನೆಯಿAದ ಸಂಜೆಯವರೆಗೂ ಪೂಜಾಕಾರ್ಯ ನೆರವೇರಿತು.