ಕುಶಾಲನಗರ, ಜು. ೮: ಹಸಿರು ಕ್ರಾಂತಿ ಹರಿಕಾರ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಪುಣ್ಯಸ್ಮರಣೆ ದಿವಸವನ್ನು ಆಚರಣೆ ಮಾಡಲಾಯಿತು.

ಕುಶಾಲನಗರ ತಾಲೂಕು ಆಡಳಿತದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸೂಚಿಸಲಾಯಿತು.

ಈ ಸಂದರ್ಭ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶ್ರೀನಿವಾಸ್, ಪುರಸಭೆ ಆರೋಗ್ಯ ನಿರೀಕ್ಷಕ ಉದಯಕುಮಾರ್, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ, ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಹೆಚ್.ಜೆ. ಲೋಕೇಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕರಾದ ಹೆಚ್.ಎಸ್. ಮಧು, ಹೆಚ್.ಎಲ್. ರವಿ, ಬಿ.ಸಿ. ಪ್ರಕಾಶ್, ಕೆ.ಕೆ. ಸೌಮ್ಯ, ಪತ್ರಕರ್ತ ಹೆಚ್.ಎಂ. ರಘು, ಮುಖಂಡರಾದ ಚಿರಂಜೀವಿ, ಆಶಾ ಕಾರ್ಯಕರ್ತೆ ಮೀನಾಕ್ಷಿ ಮತ್ತಿತರರು ಪಾಲ್ಗೊಂಡಿದ್ದರು.