ಮಡಿಕೇರಿ, ಜು. ೧೧: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಜಾರಿಗೆ ತಂದ ಶಕ್ತಿ ಯೊಜನೆಯಡಿ ಎರಡು ವರ್ಷದಲ್ಲಿ ೫೦೦ ಕೋಟಿ ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರು ಪ್ರಯಾಣ ಮಾಡಿದ್ದು, ಈ ಸಂಭ್ರಮವನ್ನು ಆಚರಿಸುವ ಸಲುವಾಗಿ ಸರಕಾರ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕಾAಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಂತೆ ಐದು ಗ್ಯಾರಂಟಿ ಯೋಜನೆಗಳ ಪೈಕಿ ಸಾರಿಗೆ ಸಂಸ್ಥೆ ಬಸ್ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ತಾ. ೧೧-೦೬-೨೦೨೩ರಂದು ಜಾರಿಗೊಳಿಸಿದ್ದು, ಇದೀಗ ಎರಡು ವರ್ಷ ಪೂರ್ಣಗೊಂಡಿದೆ. ಈ ಎರಡು ವರ್ಷದ ಅವಧಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ ೫೦೦ ಕೋಟಿಯ ಗಡಿ ದಾಟಿದೆ. ಇದು ದೇಶ ಹಾಗೂ ವಿಶ್ವದಲ್ಲೇ ಸಂಭ್ರಮದ ಸಂಗತಿಯಾಗಿದ್ದು, ಒಂದು ಸರಕಾರ ಹೆಣ್ಣು ಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಿರುವ ಏಕೈಕ ಸರಕಾರ ಎಂಬ ಹೆಮ್ಮೆ ಕರ್ನಾಟಕ ಸರಕಾರಕ್ಕೆ ಲಭಿಸುತ್ತದೆ ಎಂದು ೪ಐದÀನೇ ಪುಟಕ್ಕೆ
(ಮೊದಲ ಪುಟದಿಂದ) ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದ್ದಾರೆ.
ಈ ಹೆಗ್ಗಳಿಕೆಯನ್ನು ಸರಳ ಹಾಗೂ ಸಂಭ್ರಮದಿAದ ಆಚರಿಸುವದು ಸಮಿತಿಯ ಹಕ್ಕುಬಾಧ್ಯತೆಯಾಗಿರುವದರಿಂದ ಸಾಂಕೇತಿಕವಾಗಿ ತಾ.೧೪ರಂದು ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಬಸ್ ಡಿಪೋ, ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಸಮಿತಿ ಸದಸ್ಯರುಗಳು ಬಸ್‌ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿಹಂಚುವ ಮೂಲಕ ಆಚರಿಸಬೇಕೆಂದು ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಈ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಐದು ತಾಲೂಕುಗಳಲ್ಲಿಯೂ ಆಯಾ ತಾಲೂಕು ಅಧ್ಯಕ್ಷರುಗಳ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಸಿಹಿ ಹಂಚಲಾಗುವದು, ಶಾಸಕರು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಾರಿ ಸಂಸ್ಥೆ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಮೆಹಬೂಬ್ ಖಾನ್ ತಿಳಿಸಿದ್ದಾರೆ. -ಸಂತೋಷ್