ವೀರಾಜಪೇಟೆ, ಜು. ೧೧: ಕಳೆದ ೩೦ ವರ್ಷಗಳಲ್ಲಿ ಆರೋಗ್ಯ ಮತ್ತು ಸಾಮಾಜಿಕ ಸೇವೆಗೆ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ವೀರಾಜಪೇಟೆಯ ಮಗ್ಗುಲದಲ್ಲಿರುವ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಕಂಜಿತAಡ ಸುನಿಲ್ ಮುದ್ದಯ್ಯ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು.
ಭಾರತೀಯ ವೈದ್ಯಕೀಯ ಸಂಘ ಮತ್ತು ಕೊಡಗು ವೈದ್ಯಕೀಯ ಕಾಲೇಜು, ಇವರ ವತಿಯಿಂದ ಮಡಿಕೇರಿಯ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಡಾ. ಸುನಿಲ್ ಮುದ್ದಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಡಿಕೇರಿಯ ಕೋಯಿಮ್ಸ್ನ ನಿರ್ದೇಶಕ ಮತ್ತು ಡೀನ್ ಡಾ. ಲೋಕೇಶ್ ಎ.ಜೆ. ಮತ್ತು ಐಎಂಎ ಅಧ್ಯಕ್ಷ ಡಾ. ಶ್ಯಾಮ್ ಅಪ್ಪಣ್ಣ ವೈದ್ಯರು, ಶಿಕ್ಷಣ ತಜ್ಞರು ಮತ್ತು ಆರೋಗ್ಯ ಕ್ಷೇತ್ರದ ತಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.