ಮಡಿಕೇರಿ, ಜು. ೧೨: ಐತಿಹಾಸಿಕ ನಾಡ ಹಬ್ಬ ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪ ಸಮಿತಿಯ ಈ ಬಾರಿಯ ಅಧ್ಯಕ್ಷರಾಗಿ ಕೋಟೆ ಮಹಾಗಣಪತಿ ದೇವಾಲಯ ದಸರಾ ಮಂಟಪ ಸಮಿತಿಯ ಬಿ.ಎಂ. ಹರೀಶ್ ಅಣ್ವೇಕರ್ ಆಯ್ಕೆ ಆಗಿದ್ದಾರೆ.

ದಶಮಂಟಪ ಸಮಿತಿಯ ಜವಾಬ್ದಾರಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ದೇವಾಲಯ ದಸರಾ ಮಂಟಪ ಸಮಿತಿಗೆ ಲಭಿಸಿದ್ದು, ಕಳೆದ ಬಾರಿ ಅಧ್ಯಕ್ಷರಾಗಿದ್ದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿಯ ಜಿ.ಸಿ. ಜಗದೀಶ್ ಇಂದು ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿ ಭವನದಲ್ಲಿ ನೂತನ ಅಧ್ಯಕ್ಷ ಬಿ.ಎಂ. ಹರೀಶ್ ಅಣ್ವೇಕರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ದಸರಾ, ದಶಮಂಟಪ ಸಮಿತಿಗಳ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.