ಸಿದ್ದಾಪುರ, ಜು. ೧೩: ಅನುಮತಿ ಪಡೆಯದೆ ಕೊಳವೆ ಬಾವಿ ನಿರ್ಮಾಣ ಮಾಡುತ್ತಿರುವ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಗ್ರಾ.ಪಂ. ಅಧ್ಯಕ್ಷರ ಸೂಚನೆ ಮೇರೆಗೆ ಕೆಲಸ ಸ್ಥಗಿತಗೊಳಿಸಲಾಗಿದೆ.
ನೆಲ್ಲಿಹುದಿಕೇರಿ ಗ್ರಾಮದ ನಲ್ವತ್ತೇಕರೆಯಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಸಾರ್ವಜನಿಕ ಕುಡಿಯುವ ನೀರು ಸರಬರಾಜು ಮಾಡುವ ಕೊಳವೆ ಬಾವಿಯ ಸಮೀಪದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಯಾವುದೇ ಅನುಮತಿ ಪಡೆಯದೆ ಕೊಳವೆ ಬಾವಿಯನ್ನು ಕೊರೆಸುತ್ತಿರುವ ಕುರಿತು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿ ಕೆಲಸಕ್ಕೆ ತಡೆಯೊಡ್ಡಿದ್ದರು.
ಈ ಹಿನ್ನೆಲೆ ಮಾಹಿತಿ ಪಡೆದ ಗ್ರಾ.ಪಂ. ಅಧ್ಯಕ್ಷೆ ಧನಲಕ್ಷಿö್ಮ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಕೆಲಸ ಸ್ಥಗಿತಗೊಳಿಸಲು ಸೂಚಿಸಿದರು. ಈ ಹಿನ್ನೆಲೆ ಸದ್ಯ ಕೊಳವೆ ಬಾವಿ ಕೊರೆಸುವ ಕೆಲಸ ಸ್ಥಗಿತಗೊಂಡಿದೆ.