ಮಡಿಕೇರಿ, ಜು. ೧೨: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕನೆಕ್ಟಿಂಗ್ ಕೊಡವಾಸ್ ಇವರ ಸಹಯೋಗದಲ್ಲಿ ತಾ. ೧೪ ರಂದು ಬೆಳಿಗ್ಗೆ ೧೦ ಗಂಟೆಗೆ “ಬೇಲ್‌ರ ಕೋಯಿಮೆ” ಕಾರ್ಯಕ್ರಮ ಮುತ್ತಾರ್ಮುಡಿ ಗದ್ದೆಯಲ್ಲಿ ಆಯೋಜಿಸಲಾಗಿದೆ.
ಆಯ್ದ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ರಿಜಿಸ್ಟಾçರ್ ಅಜ್ಜಿಕುಟ್ಟಿರ ಸಿ. ಗಿರೀಶ್, ಅತ್ಯುತ್ತಮ ಕೃಷಿಕ ಪ್ರಶಸ್ತಿ / ಕೃಷಿ ಪಂಡಿತ ಪ್ರಶಸ್ತಿ ಪಡೆದಿರುವ ಸೋಮಂಗಡ ಗಣೇಶ್ ತಿಮ್ಮಯ್ಯ ಹಾಗೂ ಕನೆಕ್ಟಿಂಗ್ ಕೊಡವಾಸ್ ಸಂಸ್ಥೆಯ ಅಧ್ಯಕ್ಷ ಶಾಂತೆಯAಡ ನಿರನ್ ನಾಚಪ್ಪ ಅವರು ಭಾಗವಹಿಸಲಿದ್ದಾರೆ. ಕೃಷಿಕ ಹಾಗೂ ಉದ್ಯಮಿಯಾಗಿರುವ ಕೇಚಮಡ ಧ್ರುವ್ ದೇವಯ್ಯ ಹಾಗೂ ಕೃಷಿಕರಾಗಿರುವ ಪುದಿಯೊಕ್ಕಡ ಸೂರಜ್ ಬೋಜಣ್ಣ ಅವರು “ಎಡೆಮ್ಯಾರ್ ಒಂದ್Aಜ ಕೊಯ್‌ಪಣಿ ಕೆತ್ತೆನೆ” ಎಂಬ ವಿಷಯದ ಬಗ್ಗೆ ವಿಚಾರಮಂಡನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಕಾಡೆಮಿಯ ಎಲ್ಲಾ ಸದಸ್ಯರುಗಳು ಭಾಗವಹಿಸಲಿದ್ದಾರೆ.